ಮನೆ ರಾಜ್ಯ ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿ. ಕೆ. ಶಿವಕುಮಾರ್

ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿ. ಕೆ. ಶಿವಕುಮಾರ್

0

ಬೆಳಗಾವಿ: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

Join Our Whatsapp Group

ಬೆಳಗಾವಿಯಲ್ಲಿ ಮಾತನಾಡಿದ ಅವರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಅವರ ಧರ್ಮಪತ್ನಿ ಭಾಗಿಯಾಗಿಲ್ಲ ಇದರ ಹಿಂದೆ ರಾಜಕೀಯ ಪಿತೂರಿ ನಡೆಸಲಾಗಿದೆ ಎಂದರು, ಅಲ್ಲದೆ ಒಂದು ಪ್ರಕರಣ ಎಂದಾದ ಮೇಲೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿರುತ್ತೆ, ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು, ನಾನು ವಿಚಾರಣೆ ಮಾಡುವಂತಹದಲ್ಲ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿಯವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ ಎಂದು ಶಿವಕುಮಾರ್ ಹೇಳಿದ್ದಾರೆ.

ಗಾಂಧಿ ಪ್ರತಿಮೆ ಅನಾವರಣ‌:

ಜನವರಿ 21 ರಂದು ಸುವರ್ಣ ವಿಧಾನಸೌಧದ ಎದುರು ಗಾಂಧಿ ಪ್ರತಿಮೆ ಅನಾವರಣಗೊಳ್ಳಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಹೇಳಿದರು.

ಜೊತೆಗೆ ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ಪರಿಷತ್ತಿನ ಸಭಾಪತಿಗಳು ಭಾಗವಹಿಸಲಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದರು.