ಮನೆ ರಾಜಕೀಯ ರಾಜಕೀಯ ಕೊರೊನಾ ಹಬ್ಬಿಸುತ್ತಿರುವ ರಾಜಕೀಯ ಪಕ್ಷಗಳು: ಹೆಚ್.ಡಿ.ಕುಮಾರಸ್ವಾಮಿ

ರಾಜಕೀಯ ಕೊರೊನಾ ಹಬ್ಬಿಸುತ್ತಿರುವ ರಾಜಕೀಯ ಪಕ್ಷಗಳು: ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರು:  ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ʼರಾಜಕೀಯ ಕೊರೊನಾʼವನ್ನು ಹಬ್ಬಿಸುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್ ಮಾಡಿರುವ ಅವರು, ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಹೇಳಿದ್ದಾರೆ.

ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ  ಪ್ರತಿಷ್ಠೆಗೆ ಕೊಳ್ಳಿ ಇಟ್ಟು ʼವಿಕೃತ ಕೇಕೆʼ ಹಾಕುತ್ತಿವೆ

ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚಹಸರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ʼದ್ವೇಷದಳ್ಳುರಿʼ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ ಎಂದು ಹೇಳಿದ್ದಾರೆ.

ಹಿಜಾಬ್, ಕೇಸರಿ ಶಾಲು ಮತ್ತು ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ. ಇವೆಲ್ಲಾ ಯಾರಿಂದ ಯಾರಿಗಾಗಿ ನಡೆಯುತ್ತಿವೆ? ಈ ʼಟೂಲ್ ಕಿಟ್ʼ ರೂವಾರಿಗಳು ಯಾರು? ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ ಎನ್ನುವ ಅನುಮಾನ ನನ್ನದು. ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು ಕುಮಾರಸ್ವಾಮಿ ಟ್ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಹಿಂದಿನ ಲೇಖನಸಿಸಿಬಿ ಪೊಲೀಸರಿಂದ ಇಬ್ಬರು ಮನೆ ಕಳ್ಳರ ಬಂಧನ: ಚಿನ್ನಾಭರಣ, ಬೆಳ್ಳಿ ಪದಾರ್ಥ ವಶಕ್ಕೆ
ಮುಂದಿನ ಲೇಖನಮದುವೆಯಾದ ನಾಲ್ಕು ತಿಂಗಳಿಗೆ ನವದಂಪತಿ ಆತ್ಮಹತ್ಯೆ