ಮನೆ ರಾಜ್ಯ ಮಾರ್ಚ್ ೧೭ರಂದು ರಾಜಕೀಯ ನಿವೃತ್ತಿ ಘೋಷಣೆ: ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಮಾರ್ಚ್ ೧೭ರಂದು ರಾಜಕೀಯ ನಿವೃತ್ತಿ ಘೋಷಣೆ: ಸಂಸದ ವಿ.ಶ್ರೀನಿವಾಸ್ ಪ್ರಸಾದ್

0

ಮೈಸೂರು: ಮಾರ್ಚ್ ೧೭ರಂದು ಚುನಾವಣಾ ರಾಜಕಾರಣಕ್ಕೆ ಬಂದು ೫೦ ವರ್ಷ, ಅದೇ ದಿನ ಬೃಹತ್ ಕಾರ್ಯಕ್ರಮ ಮಾಡಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ. ಮುಂದೆ ಎಂದಿಗೂ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಯಾವ ಪಕ್ಷಕ್ಕೂ ಸಲಹೆ ಸೂಚನೆಗಳನ್ನು ನೀಡುವುದಿಲ್ಲ. ಎಲ್ಲ ರಾಜಕೀಯ ಚಟುವಟಿಕೆಗಳಿಂದ ಸಂಪೂರ್ಣ ದೂರ ಉಳಿಯುವೆ. ಮಾರ್ಚ್ ೧೭ಕ್ಕೆ ಚುನಾವಣೆ ರಾಜಕೀಯಕ್ಕೆ ಬಂದು ೫೦ ವರ್ಷ. ಅದೇ ದಿನ ಬೃಹತ್ ಕಾರ್ಯಕ್ರಮ ಮಾಡಿ ರಾಜಕೀಯ ನಿವೃತ್ತಿ ಘೋಷಣೆ ಮಾಡುವೆ ಎಂದು ಹೇಳಿದರು.