ಮನೆ ರಾಷ್ಟ್ರೀಯ ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ ಚೈತನ್ಯ ಆತ್ಮಹತ್ಯೆ

ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ ಚೈತನ್ಯ ಆತ್ಮಹತ್ಯೆ

0

ಹೈದರಾಬಾದ್: ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ (ಕೊರಿಯೊಗ್ರಾಫ‌ರ್‌) ಚೈತನ್ಯ ಭಾನುವಾರ (ಎ.30 ರಂದು) ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

Join Our Whatsapp Group

ಸಾಕಷ್ಟು ಸಾಲ ಮಾಡಿಕೊಂಡಿದ್ದ ಅವರಿಗೆ ಹಣವನ್ನು ಮರಳಿ ನೀಡಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಾಯುವುದಕ್ಕೂ ಮುನ್ನ ಅವರು ಕುಟುಂಬದವರ ಬಳಿ ಹಾಗೂ ಫ್ಯಾನ್ಸ್ ಬಳಿ ಕ್ಷಮೆ ಕೇಳಿದ್ದಾರೆ. ಅಭಿಮಾನಿಗಳು, ಚಿತ್ರರಂಗದವರು ಚೈತನ್ಯ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಚೈತನ್ಯ ಅವರು ಸಾಯುವುದಕ್ಕೂ ಮುನ್ನ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದರು. ಈ ವಿಡಿಯೋದಲ್ಲಿ ಅವರು ತಮ್ಮ ಸಾವಿಗೆ ಕಾರಣ ತಿಳಿಸಿದ್ದಾರೆ.

ಯಾವುದೇ ಸಮಸ್ಯೆಗಳನ್ನು ಎದುರಿಸಲು ಬಿಡದೆ ಅಪ್ಪ, ಅಮ್ಮ ಮತ್ತು ಸಹೋದರಿ ನನ್ನನ್ನು ಚೆನ್ನಾಗಿ ನೋಡಿಕೊಂಡರು. ನನ್ನ ಎಲ್ಲಾ ಸ್ನೇಹಿತರಿಗೆ ಪ್ರಾಮಾಣಿಕ ಕ್ಷಮೆಯಾಚಿಸುತ್ತೇನೆ. ನಾನು ಅನೇಕ ಜನರಿಗೆ ತೊಂದರೆ ನೀಡಿದ್ದೇನೆ. ಅವರೆಲ್ಲರ ಬಳಿ ಕ್ಷಮೆಯಾಚಿಸುತ್ತೇನೆ. ಹಣದ ವಿಷಯದಲ್ಲಿ ನಾನು ನನ್ನ ಒಳ್ಳೆಯತನವನ್ನು ಕಳೆದುಕೊಂಡೆ. ಕೇವಲ ಸಾಲ ತೆಗೆದುಕೊಳ್ಳುವುದು ಮಾತ್ರವಲ್ಲ, ಅದನ್ನು ಮರುಪಾವತಿಸುವ ಸಾಮರ್ಥ್ಯವನ್ನೂ ಹೊಂದಿರಬೇಕು. ಆದರೆ ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ. ನಾನು ನೆಲ್ಲೂರಿನಲ್ಲಿ ಇದ್ದೇನೆ. ಇದು ನನ್ನ ಕೊನೆಯ ದಿನ ಎಂದು ವಿಡಿಯೋದಲ್ಲಿ ಅವರು ಹೇಳಿದ್ದಾರೆ.

ಚೈತನ್ಯ ಅವರು ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೆಲುಗಿನ ‘ಡೀ’ ಡ್ಯಾನ್ಸ್ ಶೋ ಮೂಲಕ ಅವರು ಫೇಮಸ್ ಆಗಿದ್ದರು.

ಹಿಂದಿನ ಲೇಖನವರುಣಾದಲ್ಲಿ ಮುಂದುವರೆದ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ: ಬಿಜೆಪಿ ಬೂತ್ ಅಧ್ಯಕ್ಷನ ಮೇಲೆ ಹಲ್ಲೆ
ಮುಂದಿನ ಲೇಖನಕುದಿಯುತ್ತಿದ್ದ ಸಾಂಬಾರ್ ಕಡಾಯಿಗೆ ಬಿದ್ದು ಯುವಕ ಸಾವು