ಮನೆ ರಾಷ್ಟ್ರೀಯ ನೂಪುರ್‌ ಪರ ಪೋಸ್ಟ್‌ : ವ್ಯಕ್ತಿಯ ಶಿರಚ್ಚೇದ

ನೂಪುರ್‌ ಪರ ಪೋಸ್ಟ್‌ : ವ್ಯಕ್ತಿಯ ಶಿರಚ್ಚೇದ

0

ಉದಯಪುರ (Udaipur): ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಪ್ರಕಟಿಸಿದ್ದಕ್ಕಾಗಿ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.

ಉದಯಪುರದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಇಬ್ಬರು ಕಿಡಿಗೇಡಿಗಳು ವ್ಯಕ್ತಿಯ ಶಿರಚ್ಛೇದ ಮಾಡಿದ್ದಾರೆ. ಕೃತ್ಯದ ಬಳಿಕ ದುಷ್ಕರ್ಮಿಗಳು ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಪ್ರಧಾನಿ ಮೋದಿಯವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಹತ್ಯೆಯಾದ ವ್ಯಕ್ತಿ ಕೆಲವು ದಿನಗಳ ಹಿಂದೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು ಎಂದು ತಿಳಿದುಬಂದಿದೆ. ನೂಪುರ್ ಶರ್ಮಾ ಅವರು ಕೆಲವು ದಿನಗಳ ಹಿಂದೆ ಪ್ರವಾದಿ ಮಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ವ್ಯಕ್ತಿಯ ಭೀಕರ ಹತ್ಯೆ ಪ್ರಕರಣವನ್ನು ನಾನು ಖಂಡಿಸುತ್ತೇನೆ. ಈ ಘಟನೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೃತ್ಯದ ವಿಡಿಯೊವನ್ನು ಹಂಚಿಕೊಳ್ಳಬೇಡಿ. ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹಲೋತ್ ತಿಳಿಸಿದ್ದಾರೆ.