ಮನೆ ಉದ್ಯೋಗ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 14, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ .

Join Our Whatsapp Group


ಆಸಕ್ತರು ಆಫ್ ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 14, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಡ್ರೈವಿಂಗ್ ಟೆಸ್ಟ್ & ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ” ಅಂಚೆ ಇಲಾಖೆ, ಆಡಳಿತ ವಿಭಾಗ, ನವದೆಹಲಿ – 110001″ ಈ ವಿಳಾಸಕ್ಕೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 14, 2023

ಹಿಂದಿನ ಲೇಖನಈ ಐದು ರಾಶಿಯವರಿಗೆ ಸೋಲೆಂದರೆ ಇಷ್ಟವೇ ಇಲ್ಲ..!
ಮುಂದಿನ ಲೇಖನಹನುಮ ಜಯಂತಿ: ಅಂಜನಾದ್ರಿಯಲ್ಲಿ ಮನೆ ಮಾಡಿದ ಸಂಭ್ರಮ