ಮೈಸೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಯಡಿಯಲ್ಲಿ ಒಂದಾದ ಯುವ ನಿಧಿ ಕಾರ್ಯಕ್ರಮದ ೨೦೨೫ ನೇ ಸಾಲಿಗೆ ಪದವಿಧರ/ ಸ್ನಾತಕೋತ್ತರ ಪದವಿ, ಡಿಪ್ಲೋಮದಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಯುವನಿಧಿ ಕಾರ್ಯಕ್ರಮದಡಿಯಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಯುಕೇಶ್ ಕುಮಾರ್, ೨೦೨೫ನೇ ಸಾಲಿಗೆ ಯುವನಿಧಿ ಯೋಜನೆಯಡಿ ನೋಂದಾಯಿಸಲು ಪೋಸ್ಟರ್‌ನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಸವಿತಾ, ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರಾದ ಡಿ.ಎಂ.ರಾಣಿ ರವರು ಉಪಸ್ಥಿತರಿದ್ದರು.














