ಮನೆ ರಾಷ್ಟ್ರೀಯ ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ನ.13 ರಂದು ನಡೆಯಬೇಕಿದ್ದ ಉಪಚುನಾವಣೆ ಮುಂದೂಡಿಕೆ

ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ನ.13 ರಂದು ನಡೆಯಬೇಕಿದ್ದ ಉಪಚುನಾವಣೆ ಮುಂದೂಡಿಕೆ

0

ನವದೆಹಲಿ: ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13 ರಂದು ನಡೆಯಬೇಕಿದ್ದ ಉಪಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಮುಂದೂಡಿದ್ದು ನವೆಂಬರ್ 20 ರಂದು ಉಪಚುನಾವಣೆ ನಡೆಸಲು ನಿರ್ಧರಿಸಿದೆ.

Join Our Whatsapp Group

ವಿವಿಧ ಹಬ್ಬಗಳು ಬರುತ್ತಿರುವ ಕಾರಣ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಹಲವು ಪಕ್ಷಗಳು ಚುನಾವಣೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು.ಅಲ್ಲದೆ ನವೆಂಬರ್ 13ರಂದು ಹಬ್ಬಗಳು ಇರುವ ಕಾರಣ ಮತದಾನ ಪ್ರಮಾಣ ಕಡಿಮೆಯಾಗುವ ನಿಟ್ಟಿನಲ್ಲಿ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು.

ಚುನಾವಣಾ ಆಯೋಗವು ನ.13 ರಂದು 48 ವಿಧಾನಸಭಾ ಕ್ಷೇತ್ರಗಳು ಮತ್ತು ಎರಡು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕವನ್ನು ನಿಗದಿಪಡಿಸಿತ್ತು. ಇದೀಗ ಪಕ್ಷಗಳ ಬೇಡಿಕೆ ಮೇರೆಗೆ ಚುನಾವಣಾ ದಿನಾಂಕವನ್ನು ನವೆಂಬರ್ 20ಕ್ಕೆ ಮುಂದೂಡಿದ್ದು ನ.23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.