ಮಂಡ್ಯ: 66/11 ಕೆ.ವಿ ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುಂಬಕೆರೆ ಎನ್.ಜೆ.ವೈ ಫೀಡರ್ನ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ನಾಳೆ ಮೇ. 23 ರಂದು ಬೆಳಿಗ್ಗೆ 09-00 ರಿಂದ ಸಂಜೆ 5-00 ಗಂಟೆಯ ವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಗೊಳಿಸಲಾಗುವುದು.
ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರ ಗ್ರಾಮಾಂತರ ಪ್ರದೇಶ : ಹೊಡಾಘಟ್ಟ, ಕೀಲಾರ, ಈಚಗೆರೆ, ಹಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಆಲಕೆರೆ, ಚಿಕ್ಕಬಾಣಸವಾಡಿ, ದೊಡ್ಡಬಾಣಸವಾಡಿ, ಡಣಾಯಕನಪುರ, ಬಸವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾಮುಂಡೇಶ್ವರಿ ವಿದುತ್ಯ್ ಸರಬರಾಜು ನಿಗಮ ನಿಯಮಿತ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














