ಮನೆ ರಾಜ್ಯ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ರೈತರ ಖಾತೆಗೆ 975 ಕೋಟಿ ಜಮಾ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ರೈತರ ಖಾತೆಗೆ 975 ಕೋಟಿ ಜಮಾ

0

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಇಂದು 975 ಕೋಟಿಯನ್ನು ರಾಜ್ಯದ 48,75,000 ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 2022-23ನೇ ಸಾಲಿನ 2 ನೇ ಕಂತಿನ ಆರ್ಥಿಕ ನೆರವಾದ 975 ಕೋಟಿಯನ್ನು ರಾಜ್ಯದ 48,75,000 ರೈತರ ಖಾತೆಗಳಿಗೆ ನೇರವಾಗಿ ಜಮಾಕ್ಕೆ ಇಂದು ಚಾಲನೆ ನೀಡಲಿದ್ದೇನೆ ಎಂದಿದ್ದಾರೆ.

ಪಿಎಂ ಕಿಸಾನ್‌–ಕರ್ನಾಟಕ ವಿಭಾಗದಿಂದ ಈ ನಿಧಿ ಜಮಾ ಆಗುತ್ತಿದೆ. ಭಾರತದಲ್ಲಿರುವ ಭೂಹಿಡುವಳಿ ಹೊಂದಿರುವ ರೈತರಿಗೆ ಆದಾಯ ಬೆಂಬಲ ಒದಗಿಸುವ ಯೋಜನೆ ಇದಾಗಿದೆ. ಕೇಂದ್ರದಿಂದ 6000 ಹಾಗೂ ರಾಜ್ಯದಿಂದ 4000 ಸೇರಿ ಒಟ್ಟು 10000 ರೈತರಿಗೆ ನೆರವು ನೀಡಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಯೋಜನೆ ಅಡಿಯಲ್ಲಿ 2019 ರಿಂದ ಈವರೆಗೆ 50.3 ಲಕ್ಷ ಫಲಾನುಭವಿಗಳಿಗೆ 4,821 ಕೋಟಿ ಆರ್ಥಿಕ ಸಹಾಯಧನ ನೀಡಲಾಗಿದೆ.