ಮನೆ ರಾಜ್ಯ ಪ್ರಜ್ವಲ್ ಪೆನ್​​ ಡ್ರೈವ್‌ ಪ್ರಕರಣ: ಪ್ರೀತಂ ಗೌಡ ಆಪ್ತರ ನಿವಾಸದಲ್ಲಿ 10 ಪೆನ್ ​​ಡ್ರೈವ್‌, ಹಾರ್ಡ್...

ಪ್ರಜ್ವಲ್ ಪೆನ್​​ ಡ್ರೈವ್‌ ಪ್ರಕರಣ: ಪ್ರೀತಂ ಗೌಡ ಆಪ್ತರ ನಿವಾಸದಲ್ಲಿ 10 ಪೆನ್ ​​ಡ್ರೈವ್‌, ಹಾರ್ಡ್ ಡಿಸ್ಕ್ ಪತ್ತೆ

0

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡಕ್ಕೆ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್​​ಡ್ರೈವ್‌ಗಳು, ಹಾರ್ಡ್ ಡಿಸ್ಕ್ ಪತ್ತೆಯಾಗಿವೆ.

Join Our Whatsapp Group

ಪ್ರೀತಂ ಗೌಡ ಆಪ್ತರು ಮತ್ತು ಪ್ರಕರಣದ ಸಂಬಂಧ ಈಗಾಗಲೇ ಬಂಧಕ್ಕೊಳಗಾಗಿರುವವರ ಮನೆಗಳ ಮೇಲೆ ಎಸ್​ಐಟಿ ದಾಳಿ ನಡೆಸಿತ್ತು. ಈಗ ವಶಕ್ಕೆ ಪಡೆದಿರುವ ಪೆನ್​ಡ್ರೈವ್​ಗಳನ್ನು ಎಸ್​ಐಟಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಿದೆ.

ಪ್ರೀತಂಗೌಡ ಆಪ್ತರ ಮನೆಯಲ್ಲಿ ದೊರೆತ ಪೆನ್​​ಡ್ರೈವ್ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಹೌದೋ ಅಲ್ಲವೋ ಎಂಬುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕವಷ್ಟೇ ತಿಳಿದುಬರಲಿದೆ.

ಇನ್ನು ಹಾಸನದ 18 ಕಡೆ ನಡೆಸಿದ ದಾಳಿಯಲ್ಲಿ ಎಸ್​ಐಟಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. 7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, ನಾಲ್ಕು ಲ್ಯಾಪ್ ಟಾಪ್, ಮೂರು ಡೆಸ್ಕ್ ಟಾಪ್ ವಶಕ್ಕೆ ಪಡೆದಿದೆ. ದಾಳಿ ನಡೆಸಿದ ಕಡೆಯಲ್ಲಿ ಸಿಕ್ಕ ಸಿಸಿ ಕ್ಯಾಮರಾಗಳ ದೃಶ್ಯಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಪತ್ತೆಯಾದ ಹಾರ್ಡ್ಡ ಡಿಸ್ಕ್​​ಗಳಲ್ಲಿರುವ ವಿಡಿಯೋಗಳನ್ನೂ ಪರಿಶೀಲನೆ ಮಾಡಲಾಗುತ್ತಿದೆ. ವಿಡಿಯೋಗಳನ್ನು ಪೆನ್ ಡ್ರೈವ್, ಲ್ಯಾಪ್ ಟಾಪ್ ಹಾಗೂ ಡೆಸ್ಕ್ ಟಾಪ್​​ಗೆ ಕಾಪಿ ಮಾಡಿ ನಂತರ ಬೇರೆಯವರಿಗೆ ಹಂಚಿರುವ ಆರೋಪವಿದೆ.

ವಿಡಿಯೋ ಉಳ್ಳ ಪೆಬ್​ಡ್ರೈವ್ ಹಂಚಿಕೆಯ ಆರೋಪ ಎದುರಿಸುತ್ತಿರುವವರ ಮನೆ, ಕಚೇರಿಗೆ ಬಂದು ಹೋಗಿರುವವರ ಬಗ್ಗೆಯೂ ಎಸ್​​ಐಟಿ ಮಾಹಿತಿ ಕಲೆ ಹಾಕುತ್ತಿದೆ.

ಹಿಂದಿನ ಲೇಖನಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಎನ್ ​ಕೌಂಟರ್: ಇಬ್ಬರು ಉಗ್ರರ ಹತ್ಯೆ
ಮುಂದಿನ ಲೇಖನಜೂನ್‌ 4ರಂದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಅರವಿಂದ ಕೇಜ್ರಿವಾಲ್ ವಿಶ್ವಾಸ