ಮನೆ ರಾಜ್ಯ ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

0

ಹಾಸನ:  ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ  ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಹೊಳೆನರಸೀಪುರದ ರಾಘವೇಂದ್ರಸ್ವಾಮಿ, ಆಂಜನೇಯಸ್ವಾಮಿ, ಮಾವಿನಕೆರೆ ರಂಗನಾಥಸ್ವಾಮಿ ಲಕ್ಷ್ಮಿನರಸಿಂಹ ಸೇರಿದಂತೆ ವಿವಿಧ ದೇಗುಲಗಳಲ್ಲಿ ಪ್ರಜ್ವಲ್ ರೇವಣ್ಣ ಅವರು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಡಿಸಿ ಕಚೇರಿಗೆ ಆಗಮಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಶಾಸಕ ಮಾಜಿ ಸಚಿವ ಹೆಚ್.ಡಿ ರೇವಣ್ಣ ಶಾಸಕರಾದ ಎ.ಮಂಜು ಸಿ.ಎನ್ ಬಾಲಕೃಷ್ಣ ಸ್ವರೂಪ್ ಭಾಗಿಯಾಗಿದ್ದರು.

ಲೋಕಸಭಾ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ.  ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ 2ನೇ ಹಂತದ ಚುನಾವಣೆ ಮೇ 7 ರಂದು ನಡೆಯಲಿದೆ.

ಹಿಂದಿನ ಲೇಖನಸುಪಾರಿ ಹಂತಕ, ರೌಡಿಶೀಟರ್‌ ನನ್ನು ಭೀಕರವಾಗಿ ಹತ್ಯೆಗೈದ ಸ್ನೇಹಿತರು
ಮುಂದಿನ ಲೇಖನ2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿವೆ: ಎಚ್.ಡಿ ಕುಮಾರಸ್ವಾಮಿ