ಮನೆ ರಾಜ್ಯ ಭಗವಾನ್ ಶ್ರೀಕೃಷ್ಣನ ದಾಖಲೆ ಮುರಿಬೇಕು ಅಂದುಕೊಂಡಿದ್ದ ಪ್ರಜ್ವಲ್ ರೇವಣ್ಣ:  ಆರ್​ ಬಿ ತಿಮ್ಮಾಪುರ ವಿವಾದಿತ ಹೇಳಿಕೆ

ಭಗವಾನ್ ಶ್ರೀಕೃಷ್ಣನ ದಾಖಲೆ ಮುರಿಬೇಕು ಅಂದುಕೊಂಡಿದ್ದ ಪ್ರಜ್ವಲ್ ರೇವಣ್ಣ:  ಆರ್​ ಬಿ ತಿಮ್ಮಾಪುರ ವಿವಾದಿತ ಹೇಳಿಕೆ

0

ಬೆಂಗಳೂರು: ಶ್ರೀಕೃಷ್ಣನ ದಾಖಲೆಯನ್ನು ಕೂಡ ಮುರಿಯಬೇಕು ಎಂದು ಪ್ರಜ್ವಲ್ ಅಂದುಕೊಂಡಿರಬೇಕು. ಆದರೆ, ಇದು ಗಿನ್ನಿಸ್ ದಾಖಲೆಯಾಗಬಹುದೇನೋ ಎಂದು  ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಸಚಿವ ಆರ್ ​​ಬಿ ತಿಮ್ಮಾಪುರ  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Join Our Whatsapp Group

ವಿಜಯಪುರದಲ್ಲಿ ಈ ಕುರಿತು ಮಾತನಾಡಿರುವ ಅವರು, ಈ ಪೆನ್‌ ಡ್ರೈವ್ ಪ್ರಕರಣವನ್ನು ನೋಡಿದರೆ ದೇಶದಲ್ಲಿ ಇದಕ್ಕಿಂತ ಕೆಟ್ಟದ್ದೇನೂ ನಡೆದಿಲ್ಲ ಎಂಬಂತೆ ಭಾಸವಾಗುತ್ತಿದೆ. ಇದು ಗಿನ್ನಿಸ್ ದಾಖಲೆ ಮಾಡಬಹುದು. ಭಗವಾನ್ ಶ್ರೀಕೃಷ್ಣನ ಭಕ್ತಿಭಾವಕ್ಕೆ ಸ್ತ್ರೀಯರು ಪರವಶರಾಗುತ್ತಿದ್ದರು. ಆದರೆ, ಈ ಪ್ರಕರಣದಲ್ಲಿ ಹಾಗಲ್ಲ. ಕೃಷ್ಣನ ದಾಖಲೆಯನ್ನು ಮುರಿಯಲು ಪ್ರಜ್ವಲ್ ಬಯಸಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿಚಾರವಾಗಿ ತನಿಖೆಗೆ ರಾಜ್ಯ ಸರ್ಕಾರ ಎಸ್​​ಐಟಿ ರಚನೆ ಮಾಡಿದ್ದು, ಸದ್ಯ ವಿದೇಶದಲ್ಲಿರುವ ಪ್ರಜ್ವಲ್​ ವಿರುದ್ಧ ಲುಕ್​ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ.

ಹಿಂದಿನ ಲೇಖನಬಿಟ್ ಕಾಯಿನ್ ಕೇಸ್: ಡಿವೈಎಸ್ ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್
ಮುಂದಿನ ಲೇಖನಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು