ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮನೆ ಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ವಿಚಾರಣೆ ಇಂದು ನಡೆದಿದ್ದು, ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ಅರ್ಜಿ ನಡೆಸಿದೆ.
ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ
ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರವ ಪ್ರಜ್ವಲ್ ರೇವಣ್ಣ ಎರಡನೇ ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಕುಮಾರ್ ನಡೆಸಿದ್ದು, ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ತಮ್ಮ ವಾದ ಮಂಡಿಸಿದ್ದು, ಮೊದಲ ಸುತ್ತಿನಲ್ಲಿ ಜಾಮೀನು ಅರ್ಜಿ ವಜಾಗೊಂಡ ಸಂದರ್ಭದಿಂದ ತನಿಖೆಯಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ. ಸಂವಿಧಾನ 21ನೇ ವಿಧಿಯಡಿ ತಮ್ಮ ಹಕ್ಕು ಉಲ್ಲಂಘನೆಯಾಗುತ್ತಿದೆ. ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ವಿಳಂಬವಾಗುತ್ತಿರುವ ಕಾರಣದಿಂದ ಹೈಕೋರ್ಟ್ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಜುಲೈ 7ಕ್ಕೆ ವಿಚಾರಣೆ ಮುಂದೂಡಿಕೆ
ಇನ್ನು ತಮ್ಮ ವಾದಕ್ಕೆ ಪೂರಕವಾಗಿ ಮೆಮೊ ಸಲ್ಲಿಕೆ ಮಾಡಲಾಗುವುದು. ಇಂಥ ಪ್ರಕರಣಗಳಲ್ಲಿ ಪ್ರಾಯೋಗಿಕ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಪ್ರಜ್ವಲ್ ಪರ ವಕೀಲರು ಹೇಳಿದ್ದಾರೆ. ಆದರೆ ಈ ಬಗ್ಗೆ ವಾದ ಹಾಗೂ ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಯಲ್ಲಿ ಜುಲೈ 7ಕೆ ಮುಂದೂಡಲಾಗಿದೆ.
ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಎಸ್ಐಟಿ
ಇನ್ನು ಈ ಜಾಮೀನು ಅರ್ಜಿ ವಿಚಾರಣೆ ನಿನ್ನೆಯಿಂದ ನಡೆಯುತ್ತಿದ್ದು, ನಿನ್ನೆ ಎಸ್ಐಟಿ ಪರ ವಕೀಲರು ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಸಾಕ್ಷ್ಯ ವಿಚಾರಣೆ ಆರಂಭವಾಗದಿರಲು ಪ್ರಜ್ವಲ್ ಕಾರಣ ಎಂದು ಆರೋಪ ಮಾಡಿದ್ದು, ಒಂದಲ್ಲ ಒಂದು ಕಾರಣ ನೀಡಿ ಸಾಕ್ಷ್ಯ ವಿಚಾರಣೆ ಮುಂದೂಡಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.














