ಮನೆ ಕಾನೂನು ಕರ್ನಾಟಕ ಹೈಕೋರ್ಟ್’ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಸ‌ನ್ನ ಬಾಲಚಂದ್ರ ವರಳೆ

ಕರ್ನಾಟಕ ಹೈಕೋರ್ಟ್’ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಸ‌ನ್ನ ಬಾಲಚಂದ್ರ ವರಳೆ

0

ಬೆಂಗಳೂರು(Bengaluru): ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದ ಗಾಜಿನ‌ಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.

ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಮಾರಂಭದ ಸ್ವಾಗತವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಅವರು ನೆರವೇರಿಸಿದರು.