ಬೆಂಗಳೂರು: ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ಹೊಂದಾಣಿಕೆ ರಾಜಕಾರಣ ಮಾಡುತ್ತಿರುವುದು ಯಾರು ..? ನಾನು ವಿರೋಧ ಪಕ್ಷದವರ ಜತೆ ರಾಜಕೀಯವಾಗಿ ಮಾತನಾಡಲ್ಲ ತನಿಖೆ ಮಾಡಿಸಿ ಅಂತಾ ಪ್ರತಾಪ್ ಸಿಂಹ ಹೇಳಿದ್ರಾ..? ಸಂಸದ ಪ್ರತಾಪ್ ಸಿಂಹ ಎಳಸು. ಪ್ರತಾಪ್ ಸಿಂಹಗೆ ರಾಜಕೀಯ ಪ್ರಬುದ್ಧತೆ ಇಲ್ಲ. ಮೈಸೂರು –ಬೆಂಗಳೂರು ಹೈವೇ ಮಾಡಿಸಿದ್ದು ನಾನೇ ಅಂತಾರೆ ಎಂದು ವಾಗ್ದಾಳಿ ನಡೆಸಿದರು.
ಅಧಿಕಾರಿಗಳ ಜೊತೆ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ, ನಿನ್ನೆ ಅಧಿಕೃತವಾಗಿ ಸಭೆ ನಡೆಸಿಲ್ಲ ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚಿಸಲು ಶಾಸಕರ ಸಭೆ ಕರೆಯಲಾಗಿತ್ತು. ಬೆಂಗಳೂರು ನಗರ ಸಂಬಂಧ ಸಭೆ ಕರೆಯಲಾಗಿತ್ತು ಅಷ್ಟೆ. ಸುರ್ಜೇವಾಲ ಶಾಂಗ್ರಿಲಾ ಹೋಟೆಲ್ ನಲ್ಲಿ ಇದ್ದರು ಡಿಕೆಶಿ ಭೇಟಿ ಮಾಡಲು ಹೋಗಿದ್ದರು. ಬಿಜೆಪಿಯವರು ರಾಜ್ಯಪಾಲರಿಗೆ ದೂರು ಕೊಡುವುದಾದರೇ ಕೊಡಲಿ ಎಂದು ಹೇಳಿದರು.