ಮಂಗಳೂರು(Mangalore): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಸಿಎಂ ಜೊತೆಗೆ ಎಲ್ಲಾ ರೀತಿಯ ಚರ್ಚೆ ನಡೆಸಲಾಗಿದೆ. ಪರಿಸ್ಥಿತಿಯ ಬಗ್ಗೆ ಡಿಜಿ ಪ್ರವೀಣ್ ಸೂದ್ ಎಲ್ಲಾ ಮಾಹಿತಿಯನ್ನು ನೀಡಿದ್ದಾರೆ. ಪೊಲೀಸರು ಕೇರಳಾಗೆ ತೆರಳಿ ಹುಡುಕಾಟ ನಡೆಸುತ್ತಿದ್ದಾರೆ ಎಂದರು.
ಪ್ರಕರಣ ಸಂಬಂಧ 10 ಮಂದಿ ವಶಕ್ಕೆ ಪಡೆಯಲಾಗಿದೆ. ಕೇರಳ ಸರ್ಕಾರದ ಜೊತೆ ನಮ್ಮ ಡಿಜಿ ಮಾತನಾಡಿದ್ದಾರೆ. ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಹತ್ಯೆ ಪ್ರಕರಣವನ್ನ ಎನ್ ಐಎಗೆ ಕೊಡಲು ತಯಾರಿದ್ದೇವೆ. ಶಾಂತಿ-ಸುವ್ಯವಸ್ಥೆ ಕಾಪಾಡಲಾಗುತ್ತದೆ. ಅಪರಾಧಿಗಳನ್ನು ಬಂಧಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡಾಲು ಸಚಿವರು ಮನವಿ ಮಾಡಿದ್ದಾರೆ.