ಮನೆ ಅಪರಾಧ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

0

ಸುಳ್ಯ: 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿಯನ್ನು ಶುಕ್ರವಾರ (ಮೇ10) ಬಂಧಿಸಲಾಗಿದೆ.

Join Our Whatsapp Group

ಪ್ರಮುಖ ಆರೋಪಿ ಎನ್ನಲಾದ ಸುಳ್ಯದ ಮುಸ್ತಫಾ ಪೈಚಾರು ಎಂಬಾತ ಬಂಧಿತ ಎನ್ನಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಆಶ್ರಯ ನೀಡಿದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

2022ರ ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ರಾಷ್ಟ್ರೀಯ ತನಿಖಾ ದಳ ತನಿಖೆ ಮುಂದುವರಿಸಿದೆ. ಆರೋಪಿ ಮುಸ್ತಫಾಗೆ ಎನ್‌ಐಎ ಲುಕ್‌ ಔಟ್‌ ನೋಟೀಸ್‌ ಹೊರಡಿಸಿದ್ದು, ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 20 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಎನ್‌ಐಎ ಚಾರ್ಜ್‌ಶೀಟ್‌ನ ಪ್ರಕಾರ, ಒಂದು ಸಮುದಾಯದ ಸದಸ್ಯರಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಕೋಮು ದ್ವೇಷ ಮತ್ತು ಅಶಾಂತಿಯನ್ನು ಸೃಷ್ಟಿಸಲು ಪಿಎಫ್‌ಐನ ಕಾರ್ಯಸೂಚಿಯ ಭಾಗವಾಗಿ ಪ್ರವೀಣ್ ನೆಟ್ಟಾರು ಅವರನ್ನು ಹರಿತವಾದ ಆಯುಧಗಳಿಂದ ಹತ್ಯೆ ಮಾಡಲಾಗಿತ್ತು.

ಹಿಂದಿನ ಲೇಖನಮತದಾನದ ದಿನ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ ಬಿ ವೈ ರಾಘವೇಂದ್ರರನ್ನು ಬಂಧಿಸಿ: ಕೆ ಎಸ್ ಈಶ್ವರಪ್ಪ
ಮುಂದಿನ ಲೇಖನರಾಜ್ಯಾಧ್ಯಕ್ಷ ಹುದ್ದೆ, ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸಲ್ಲ: ಹೈಕೋರ್ಟ್‌ ಗೆ ಜೆಡಿಎಸ್‌ ಮೌಖಿಕ ವಿವರಣೆ