ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ 6 ಕಡೆಗಳಲ್ಲಿ ಏಕಕಾಲಕ್ಕೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳಗ್ಗೆ ನಿಷೇಧಿತ ಪಿಎಫ್ ಐ ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್ ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.