ದಕ್ಷಿಣ ಕನ್ನಡ(Dakshina kannada): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಪ್ರವೀಣ್ ಹತ್ಯೆ ನಡೆದ ಒಂದೇ ದಿನಕ್ಕೆ ಝಾಕಿರ್, ಶಫಿಕ್ ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಅದರಂತೆ ಕೋರ್ಟ್ ಆರೋಪಿಗಳನ್ನು ಐದು ದಿನಗಳ ಕಾಲ ಕಸ್ಟಡಿಗೆ ನೀಡಿ ಆದೇಶಿಸಿದೆ. ಸದ್ಯ ಆರೋಪಿಗಳನ್ನು ಗೌಪ್ಯ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಸರಣಿ ಹತ್ಯೆಗಳಿಂದಾಗಿ ಕರಾವಳಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸುತ್ತಿದ್ದಾರೆ.