ಮನೆ ರಾಜ್ಯ ಪ್ರವೀಣ್ ಹತ್ಯೆ: ಪಾತಕಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪೇಜಾವರ ಶ್ರೀ ಒತ್ತಾಯ

ಪ್ರವೀಣ್ ಹತ್ಯೆ: ಪಾತಕಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪೇಜಾವರ ಶ್ರೀ ಒತ್ತಾಯ

0

ಉಡುಪಿ(Udupi): ಸರ್ಕಾರದ ಮೇಲೆ ಜನರು ವಿಶ್ವಾಸ ಕಳೆದುಕೊಳ್ಳುವುದಕ್ಕೂ ಮುನ್ನ ಸರ್ಕಾರ ಪಾತಕಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಸಂಘಟನೆಯ ಧುರೀಣ ಪ್ರವೀಣ್ ಹತ್ಯೆ ಕುರಿತು ಪ್ರತಿಕ್ರಿಯಿಸಿದ ಅವರು, ಕೊಲೆಯಂತಹ ಹೇಯಕೃತ್ಯ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು. ನಾಡಿನಲ್ಲಿ ಇಂಥಹ ದುಷ್ಕೃತ್ಯಗಳು ನಿರಂತರವಾಗಿ ನಡೆಯುತ್ತಿರುವುದರಿಂದ ಜನಾಕ್ರೋಶ ಹೆಚ್ಚಾಗಿದ್ದು, ಸರ್ಕಾರಗಳು  ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈಚೆಗಷ್ಟೆ ನಡೆದ ಹರ್ಷನ ಹತ್ಯೆಯ ದುಃಖದಿಂದ ಹೊರಬರುವ ಮುನ್ನವೇ ಮತ್ತೊಬ್ಬ ತರುಣನ ಕೊಲೆಯಾಗಿದ್ದು, ಹಿಂದೂಗಳ ಸಹನೆಯ ಕಟ್ಟೆ ಒಡೆಯುವಷ್ಟು ಆಕ್ರೋಶ ವ್ಯಕ್ತವಾಗುತ್ತಿರುವುದು ಸಹಜ. ಆದರೆ, ಯಾರೂ ಧೈರ್ಯ ಕಳೆದುಕೊಳ್ಳಬಾರದು. ಸಂಯಮದಿಂದ ಒಗ್ಗಟ್ಟು ಕಾಯ್ದುಕೊಳ್ಳಬೇಕು. ಎಲ್ಲರ ನೋವಿನಲ್ಲಿ ಸಹಾನುವರ್ತಿಯಾಗಿದ್ದೇನೆ ಎಂದು ತಿಳಿಸಿರುವ ಸ್ವಾಮೀಜಿ, ಮೃತ ಪ್ರವೀಣನ ಆತ್ಮಕ್ಕೆ ಸದ್ಗತಿ ದೊರೆಯಲಿ. ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ತಿಳಿಸಿದ್ದಾರೆ.