ಮೈಸೂರು (Mysuru): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸನ್ನಡತೆಯ ಆಧಾರದ ಮೇಲೆ ಮೈಸೂರು ಕೇಂದ್ರ ಕಾರಾಗೃಹದ 20 ಖೈದಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ವಿವಿಧ ಅಪರಾಧ ಪ್ರಕರಣಗಳ ಹಿನ್ನೆಲೆ ಜೈಲು ಶಿಕ್ಷೆಗೆ ಗುರಿಯಾಗಿದ್ದ 20 ಜನ ಖೈದಿಗಳು ತಪ್ಪಿಗೆ ಪಶ್ಚಾತ್ತಾಪ ಪಟ್ಟು ಸನ್ನಡತೆಯಿಂದ ಇದ್ದರು. ಸರ್ಕಾರದ ನಿರ್ದೇಶನದ ಮೇರೆಗೆ ಸುಮಾರು 20 ಮಂದಿ ಸಜಾ ಖೈದಿಗಳು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 81 ಖೈದಿಗಳು ಬಿಡುಗಡೆಯಾಗಿದ್ದಾರೆ. ಇವರೆಲ್ಲ ಒಂದು ಅರ್ಥ ಪೂರ್ಣ ಅಮೃತ ಮಹೋತ್ಸವಕ್ಕೆ ಸಾಕ್ಷಿಯಾದ್ದಾರೆ ಎಂದು ಕಾರಾಗೃಹದ ಅಧೀಕ್ಷಕಿಯಾದ ದಿವ್ಯಶ್ರೀ ಸಾಜಾ ಖೈದಿಗಳಿಗೆ ಬಿಳ್ಕೋಡುಗೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ದೇವರಾಜ್ ಭೂತೆ ಮಾತನಾಡಿ, ಪ್ರತಿ ವರ್ಷದಂತೆ ಕೇಂದ್ರ ಕಾರಾಗೃಹಗಳಲ್ಲಿ ಸನ್ನಡತೆ ಆಧಾರದಲ್ಲಿ ಖೈದಿಗಳನ್ನು ಬಿಡುಗಡೆ ಮಾಡುವ ಪದ್ದತಿ ಇತ್ತು. ಆದರೆ ಈ ಬಾರಿ ಅಲ್ಪಾವಧಿ ಶಿಕ್ಷೆ ಅನುಭವಿಸುತ್ತಿದ್ದ ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಂದ ಹೋದವರು ಮತ್ತೆ ಯಾವುದೇ ಅಪರಾಧ ಮಾಡಬೇಡಿ ಉತ್ತಮ ಬದುಕು ಕಟ್ಟಿಕೊಳ್ಳಿ, ಉತ್ತಮ ನಾಗರಿಕರಾಗಿ ಜೀವನ ನಡೆಸಿ ಎಂದು ಸಲಹೆ ನೀಡಿದರು.