ಮನೆ ರಾಜಕೀಯ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಒತ್ತು: ಸಚಿವ ಕೆ.ಗೋಪಾಲಯ್ಯ

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಒತ್ತು: ಸಚಿವ ಕೆ.ಗೋಪಾಲಯ್ಯ

0

ಮಂಡ್ಯ: ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ತಗೆದುಕೊಂಡು ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃಧ್ದಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿಂದು ನಡೆದ 73 ನೇ ಗಣರಾಜ್ಯೋತ್ಸವ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನನ್ನ ಮೇಲೆ ವಿಶ್ವಾಸವಿಟ್ಟು ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.

ಬಿಜೆಪಿ ಪಕ್ಷಕ್ಕೆ ಬಂದ ಮೇಲೆ ಶಾಸಕರಾಗಿದ್ದೇವೆ, ಪಕ್ಷ ಅನೇಕ ಸ್ಥಾನ ಮಾನ ನೀಡಿದೆ. ಪಕ್ಷದ ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರಬೇಕು.ಆದರೆ ಮತ್ತೆ ಪಕ್ಷಾಂತರ ಕುರಿತಂತೆ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗೆ ಅವರೇ ಉತ್ತರ ಕೊಡಬೇಕು ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವ ಗೋಪಾಲಯ್ಯ ಉತ್ತರಿಸಿದರು.

ಈ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಶ್ ಇತರರು ಉಪಸ್ಥಿತರಿದ್ದರು.

ಹಿಂದಿನ ಲೇಖನಪ್ರಾಮಾಣಿಕ‌ ಚುನಾವಣೆಗಳು ನಡೆಯಬೇಕು: ಎಚ್‌ಡಿಕೆ
ಮುಂದಿನ ಲೇಖನರೈಲ್ವೆ ಕ್ರೀಡಾ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ