ಮನೆ ಅಪರಾಧ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

0

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಬಾಣಂತಿಯೊಬ್ಬರು ಮಂಗಳವಾರ ನಸುಕಿನಲ್ಲಿ  ಮೃತಪಟ್ಟಿದ್ದಾರೆ.

Join Our Whatsapp Group

ಬೆಳಗಾವಿ ತಾಲ್ಲೂಕಿನ ನಿಲಜಿಯ ಅಂಜಲಿ ಪಾಟೀಲ(32) ಮೃತರು‌.

ವೈದ್ಯರು ಜನವರಿ 22ರಂದು ಹೆರಿಗೆಗೆ ದಿನಾಂಕ ನೀಡಿದ್ದರು. ಹೆರಿಗೆ ನೋವು ಕಾಣಿಸದ ಹಿನ್ನೆಲೆಯಲ್ಲಿ ಅಂಜಲಿ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

ಹೆರಿಗೆಯಾದಾಗ ಅಂಜಲಿ ಆರೋಗ್ಯ ಸ್ಥಿರವಾಗಿತ್ತು. ಆದರೆ, ಮಂಗಳವಾರ ನಸುಕಿನ ಜಾವ ಆರೋಗ್ಯ ಸ್ಥಿತಿ ಬಿಗಡಾಯಿಸಿ ಸಾವನ್ನಪ್ಪಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು  ಆರೋಪಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಶವಾಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌

ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಬಂದಿರುವ ಅಧಿಕಾರಿಗಳನ್ನು ಕುಟುಂಬಸ್ಥರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.