ಶಿವಮೊಗ್ಗ : ಆನವಟ್ಟಿ ತಾಲೂಕಿನ ಎಣ್ಣೆಕೊಪ್ಪ, ಬೆಲವಂತನಕೊಪ್ಪ ಹಾಗೂ ತೆವರತೆಪ್ಪ ಗ್ರಾಮದಲ್ಲಿ ನಿರಂತರವಾಗಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಸ್ಫೋಟದ ತೀವ್ರತೆಗೆ ಈ ಗ್ರಾಮಗಳ ಗರ್ಭಿಣಿಯರು ರಕ್ತಸ್ರಾವದಿಂದ ಬಳಲುತ್ತಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳದ ಸಚಿವ ಮಧು ಬಂಗಾರಪ್ಪ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.
ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಗ್ರಾಮಸ್ಥರು ವಿಠಲ ದೇವಾಲಯದಿಂದ ನಾಡ ಕಚೇರಿಯವರಿಗೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ಸ್ಫೋಟದ ತೀವ್ರತೆಗೆ ಗರ್ಭಿಣಿಯರು ರಕ್ತಸ್ರಾವಕ್ಕೆ ಒಳಗಾಗುತ್ತಿದ್ದು, ಗರ್ಭಪಾತ ಆಗುವ ಆತಂಕ ಎದುರಿಸುತ್ತಿದ್ದಾರೆ.
ಈ ಬಗ್ಗೆ ಹಲವು ಬಾರಿ ಸಚಿವರ ಬಳಿ ಮನವಿ ಮಾಡಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಫೋಟದ ಧೂಳಿನಿಂದ ಕುಡಿಯುವ ನೀರು ಕಲುಷಿತಗೊಳ್ಳುತ್ತಿದೆ. ಜನ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸೊರಬ ತಹಶೀಲ್ದಾರ್ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.














