ಬೆಂಗಳೂರು: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರುತ್ತಿದ್ದಂತೆ ಉಕ್ರೇನ್ ನಲ್ಲಿ ರಷ್ಯಾ ಯುದ್ಧ ವಿಮಾನಗಳು ಪ್ರಮುಖ ನಗರಗಳ ಮೇಲೆ ದಾಳಿ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ಆರಂಭಿಸಿದೆ.
ಉಕ್ರೇನ್ ನಿಂದ ಕನ್ನಡಿಗರನ್ನು ರಕ್ಷಿಸಿ, ವಾಪಸ್ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಐಎಫ್ಎಸ್ ಅಧಿಕಾರಿ ಮನೋಜ್ ರಾಜನ್ರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ.ವಿದೇಶಾಂಗ ಸಚಿವಾಲಯ ಹಾಗೂ ಉಕ್ರೇನ್ ಕಿವ್ನಲ್ಲಿನ ಭಾರತೀಯ ರಾಯಭಾರ ಕಚೇರಿ ಜೊತೆ ನೋಡಲ್ ಅಧಿಕಾರಿ ನಿರಂತರ ಸಂಪರ್ಕದಲ್ಲಿದ್ದು, ಸಮನ್ವಯ ಸಾಧಿಸಿ ಅಲ್ಲಿ ಸಿಲುಕಿಕೊಂಡಿರುವ ರಾಜ್ಯದ ಜನರನ್ನು ಕರೆತರುವ ಕೆಲಸ ಮಾಡಲಿದ್ದಾರೆ.
24/7 ಹೆಲ್ಪ್ ಲೈನ್ ಸಂಖ್ಯೆ: 080-1070,080-22340676
manoarya@gmail.com, revenuedmkar@gmail.com ಮೂಲಕ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ.