ಮನೆ ರಾಜ್ಯ ಇನ್ಪೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ಇನ್ಪೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

0

ನವದೆಹಲಿ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಖುಷಿಯ ವಿಚಾರವನ್ನು ಹಂಚಿಕೊಂಡಿರುವ ಅವರು, “ಭಾರತದ ರಾಷ್ಟ್ರಪತಿಗಳು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರಿ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ಪ್ರಬಲ ಸಾಕ್ಷಿಯಾಗಿದೆ. ನಾರಿ ಶಕ್ತಿ’, ನಮ್ಮ ದೇಶದ ಭವಿಷ್ಯ ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ರಾಜ್ಯಸಭೆ ಸದಸ್ಯೆಯಾಗಿ ಅವರ ಮುಂದಿನ ಪಯಣ ಶುಭಕರವಾಗಿರಲಿ.” ಎಂದು ಆಶಯ ವ್ಯಕ್ತಪಡಿಸಿದ್ದಾರೆ.