ಮನೆ ದೇಶ ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಘೋಷಣೆ

ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಘೋಷಣೆ

0

ನವದೆಹಲಿ(New Delhi): ರಾಷ್ಟ್ರಪತಿ ಆಯ್ಕೆಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ವಿಪಕ್ಷಗಳು ಘೋಷಿಸಿವೆ. ದೆಹಲಿಯಲ್ಲಿ ಇಂದು ಮಂಗಳವಾರ 18 ವಿಪಕ್ಷಗಳು ನಡೆಸಿದ ಸಭೆಯಲ್ಲಿ ಯಶವಂತ್ ಸಿನ್ಹಾ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು.

ಸಂಸತ್ ಭವನದಲ್ಲಿ ಮಂಗಳವಾರ ಬೆಳಗ್ಗೆಯಿಂದ ನಡೆದ ಈ ಸಭೆಯಲ್ಲಿ ಕಾಂಗ್ರೆಸ್ ಕೂಡ ಪಾಲ್ಗೊಂಡಿತ್ತು. ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಯಶವಂತ್ ಸಿನ್ಹಾ ಹೆಸರನ್ನು ಈ ಸಭೆಯಲ್ಲಿ ಟಿಎಂಸಿಯೇ ಮುಂದಿಟ್ಟಿತು. ಎಲ್ಲಾ ಪಕ್ಷಗಳೂ ಇದಕ್ಕೆ ಸಹಮತ ವ್ಯಕ್ತಪಡಿಸಿದವೆನ್ನಲಾಗಿದೆ.

ಇದಕ್ಕೆ ಮುನ್ನ ಕಾಂಗ್ರೆಸ್ ಸೇರಿದಂತೆ ಕೆಲ ವಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆ ಸ್ಪರ್ಧೆಗೆ ಹಲವರ ಹೆಸರು ಮುಂದಿಡಲಾಗಿತ್ತು. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ನ್ಯಾಷನಲ್ ಕಾನ್ಫೆರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಅವರನ್ನು ವಿಪಕ್ಷಗಳು ಮನವಿ ಮಾಡಿಕೊಂಡಿದ್ದರು. ಆದರೆ, ಈ ಮೂವರೂ ಕೂಡ ಸ್ಪರ್ಧಿಸಲು ನಿರಾಕರಿಸಿದರೆನ್ನಲಾಗಿದೆ. ಗೋಪಾಲಕೃಷ್ಣ ಗಾಂಧಿ ಅವರು ಮಹಾತ್ಮ ಗಾಂಧಿ ಅವರ ಮೊಮ್ಮಗರಾಗಿದ್ದಾರೆ.