ಮನೆ ಕ್ರೀಡೆ ಪ್ರತಿಷ್ಠಿತ ಆ್ಯಶಸ್ ಸರಣಿ​: ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ​ಗೆ ಮಾಡು ಇಲ್ಲವೇ ಮಡಿ ಪಂದ್ಯ

ಪ್ರತಿಷ್ಠಿತ ಆ್ಯಶಸ್ ಸರಣಿ​: ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ​ಗೆ ಮಾಡು ಇಲ್ಲವೇ ಮಡಿ ಪಂದ್ಯ

0

ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯವು ಜುಲೈ 27 ರಿಂದ ಶುರುವಾಗಲಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಸರಣಿ ನಿರ್ಣಾಯಕ.

Join Our Whatsapp Group

5 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 2 ವಿಕೆಟ್ ​ಗಳಿಂದ ರೋಚಕ ಜಯ ಸಾಧಿಸಿತ್ತು. ಇನ್ನು ಲಾರ್ಡ್ಸ್​ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲೂ ಇಂಗ್ಲೆಂಡ್ ತಂಡವನ್ನು 43 ರನ್​ಗಳಿಂದ ಸೋಲಿಸುವಲ್ಲಿ ಆಸ್ಟ್ರೇಲಿಯಾ ಯಶಸ್ವಿಯಾಗಿತ್ತು. ಆದರೆ ಹೆಡಿಂಗ್ಲಿಯಲ್ಲಿ ನಡೆದ 3ನೇ ಟೆಸ್ಟ್​ ಪಂದ್ಯದಲ್ಲಿ 3 ವಿಕೆಟ್ ​ಗಳ ಭರ್ಜರಿ ಜಯ ಸಾಧಿಸಿದ ಇಂಗ್ಲೆಂಡ್ ಸರಣಿಯನ್ನು 2-1 ಅಂತರಕ್ಕಿಳಿಸಿದರು.

ಆದರೆ ಮ್ಯಾಂಚೆಸ್ಟರ್ ​ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ 4ನೇ ಟೆಸ್ಟ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ ಇಂಗ್ಲೆಂಡ್ ತಂಡದ ಸರಣಿ ಗೆಲ್ಲುವ ಕನಸು ಕೂಡ ಕಮರಿದೆ. ಇದೀಗ ಕಡೆಯ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಅಥವಾ ಡ್ರಾ ಮಾಡಿಕೊಳ್ಳುವ ಮೂಲಕ ಸರಣಿ ಜಯಿಸುವ ಅವಕಾಶ ಆಸ್ಟ್ರೇಲಿಯಾ ತಂಡದ ಮುಂದಿದೆ.

ಮತ್ತೊಂದೆಡೆ ಸರಣಿಯನ್ನು ಡ್ರಾ ಮಾಡಿಕೊಳ್ಳಲು ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ​ತಂಡ ಗೆಲ್ಲಲೇಬೇಕು. ಅಂದರೆ ಇಂಗ್ಲೆಂಡ್ ಪಾಲಿಗೆ 5ನೇ ಟೆಸ್ಟ್ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.

ಹೀಗಾಗಿ ಜೂನ್ 27 ರಿಂದ ಕೆನ್ನಿಂಗ್ಟನ್ ​ನಲ್ಲಿ ಶುರುವಾಗಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಮೊಯಿನ್ ಅಲಿ, ಜೇಮ್ಸ್ ಅ್ಯಂಡರ್ಸನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಡಾನ್ ಲಾರೆನ್ಸ್, ಒಲ್ಲಿ ರಾಬಿನ್ಸನ್, ಜೋ ರೂಟ್, ಜೋಶ್ ಟಂಗ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್, ಜೋಶ್ ಹ್ಯಾಜಲ್‌ ವುಡ್, ಮಾರ್ಕಸ್ ಹ್ಯಾರಿಸ್, ಮೈಕೆಲ್ ನೆಸರ್ , ಜೋಶ್ ಇಂಗ್ಲಿಸ್, ಕ್ಯಾಮರೋನ್ ಗ್ರೀನ್.

ಹಿಂದಿನ ಲೇಖನಬನ್ನೂರು ರಾಜು ಸಾಹಿತ್ಯ ಪ್ರಭೆ ಭಾರತಾಂಬೆಗೆ ಸಲ್ಲುವಂತದ್ದು: ಅವಧೂತ ಅರ್ಜುನ್ ಗುರೂಜಿ
ಮುಂದಿನ ಲೇಖನಗೃಹಲಕ್ಷ್ಮೀ ಯೋಜನೆ: ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ- ಮುಖ್ಯಮಂತ್ರಿ ಸಿದ್ದರಾಮಯ್ಯ