ಮನೆ ರಾಜ್ಯ ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಬೆಲೆ ಏರಿಕೆಯಾಗಿದೆ: ಗೃಹ ಸಚಿವ ಪರಮೇಶ್ವರ್‌

ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಬೆಲೆ ಏರಿಕೆಯಾಗಿದೆ: ಗೃಹ ಸಚಿವ ಪರಮೇಶ್ವರ್‌

0

ಬೆಂಗಳೂರು: ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ . ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಬೆಲೆ ಏರಿಕೆಯಾಗಿದೆ. ಗ್ಯಾರಂಟಿಗೂ ಬೆಲೆ ಏರಿಕೆಗೆ ಸಂಬಂಧ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದರು.

ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ಇಂದು ಕೋರಮಂಗಲದ ಕೆಎಸ್‌ಆರ್‌ಪಿ ಆವರಣರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಪದಕ ನೀಡಿ ಗೌರವಿಸಲಾಯಿತು.ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪರಮೇಶ್ವರ್‌,ರಾಜ್ಯ ಮತ್ತು ಕೇಂದ್ರದ ಸಂಬಂಧ ಸರಿಯಿಲ್ಲ.ನಾವು 20 ಸಾವಿರ ಕೋಟಿ ರೂ.ಗೂ ಹೆಚ್ಚು ತೆರಿಗೆ ಕೊಡುತ್ತೇವೆ. ಅವರು ನಮಗೆ ಬರಬೇಕಾದ ಪಾಲು ವಾಪಸ್ ಕೊಡುತ್ತಿಲ್ಲ. ಹೀಗಾಗಿ ಕೆಲ ಅನಿವಾರ್ಯ ಕಾರಣಗಳಿಂದಾಗಿ ಬೆಲೆ ಏರಿಕೆ ಆಗುತ್ತಿದೆ ಎಂದು ಸರ್ಕಾರದ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡರು.