ತುಮಕೂರು : ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕನೊಬ್ಬ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಮಲ್ಲೆಶ್ವರ ಸ್ವಾಮಿ ದೇವಸ್ಥಾನದ ಅರ್ಚಕ ಶಿವಣ್ಣ (40) ಎಂದು ಗುರುತಿಸಲಾಗಿದೆ.
ಅವರು ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ್ (05) ಕತ್ತುಹಿಸುಕಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಶಿವಣ್ಣರ ಪತ್ನಿ ಮಂಜುಳಾ ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.















