ಮನೆ ರಾಜ್ಯ ಸಿದ್ದರಾಮಯ್ಯ, ಡಿಕೆಶಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

ಸಿದ್ದರಾಮಯ್ಯ, ಡಿಕೆಶಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

0

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

Join Our Whatsapp Group

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್​ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಪ್ರಧಾನಿ ಮೋದಿ ಕನ್ನಡ ಮತ್ತು ಇಂಗ್ಲಿಷ್ ​ನಲ್ಲಿ ಟ್ವೀಟ್​ ಮಾಡಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಹ ಟ್ವೀಟ್​ ಮಾಡಿದ್ದು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.