ಬೆಂಗಳೂರು: ಅನಾರೋಗ್ಯ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಟ್ವೀಟ್ ಮಾಡಿದ್ದರು. ಈ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಹೆಚ್ಡಿ ದೇವೇಗೌಡ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ಮಾಡಿ, ಹೊಸ ಸರ್ಕಾರದ ಬಗ್ಗೆ ತಮಗೆ ಇರುವ ಆಲೋಚನೆಗಳನ್ನು ನನ್ನೊಂದಿಗೆ ಹಂಚಿಕೊಂಡರು. ಹಾಗೆ ನನ್ನ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಾಳಜಿಗೆ ನಾನು ಆಭಾರಿಯಾಗಿದ್ದೇನೆ. ಅವರ ಈ ಕಾಳಜಿ ನನ್ನನ್ನು ಭಾವುಕರನ್ನಾಗಿಸಿತು. ಪರಮಾತ್ಮನ ಆಶೀರ್ವಾದ ಸದಾ ಅವರ ಮೇಲಿರಲಿ. ಅವರು ಭಾರತವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿ ಎಂದು ಟ್ವೀಟ್ ಮಾಡಿದ್ದಾರೆ.
ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಭಾಗಿಯಾಗಲಿಲ್ಲ. ಈ ಕುರಿತು ಟ್ವೀಟ್ ಮಾಡಿದ ಹೆಚ್ಡಿ ದೇವೇಗೌಡ “ಜೂನ್ 9 ರಂದು ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅನಾರೋಗ್ಯ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹಾಜರಾಗಲು ಆಗಲಿಲ್ಲ. ಆದರೆ ನಾನು ಟಿವಿಯಲ್ಲಿ ಸಮಾರಂಭವನ್ನು ನೋಡಿದ್ದೇನೆ. ಕಾಂಗ್ರೆಸ್ ಏನೇ ಹೇಳಿದರೂ ಭಾರತೀಯ ಪ್ರಜಾಪ್ರಭುತ್ವ ಸದೃಢವಾಗಿದೆ ಎಂದು ಹೆಚ್ಡಿ ದೇವೇಗೌಡ ಜೂನ್9 ರಂದು ಟ್ವೀಟ್ ಮಾಡಿದ್ದರು.