ಮನೆ ರಾಷ್ಟ್ರೀಯ ಮಕರ ಸಂಕ್ರಾಂತಿ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ

ಮಕರ ಸಂಕ್ರಾಂತಿ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಮಕರ ಸಂಕ್ರಾಂತಿ  ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ.

ಕನ್ನಡದಲ್ಲೇ ಶುಭ ಕೋರಿದ ಮೋದಿ

ಸಾಮಾಜಿಕ ಮಾಧ್ಯಮ ಎಕ್ಸ್​​ ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸಿರುವ ಮೋದಿ, ‘ಸಂಕ್ರಾಂತಿಯ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ’ ಎಂದು ಉಲ್ಲೇಖಿಸಿದ್ದಾರೆ.

ಸಾಧನೆ, ಧ್ಯಾನ ಮತ್ತು ದಾನದ ಪವಿತ್ರ ಸಂಪ್ರದಾಯದೊಂದಿಗೆ ಸಂಬಂಧ ಹೊಂದಿರುವ ಪವಿತ್ರ ಹಬ್ಬವಾದ ಮಕರ ಸಂಕ್ರಾಂತಿಯ ಶುಭಾಶಯಗಳು. ಈ ಪ್ರಕೃತಿಯ ಹಬ್ಬದಂದು, ಉತ್ತರಾಯಣ ಪರ್ವ ಕಾಲದಲ್ಲಿ ಸೂರ್ಯ ದೇವರು ನನ್ನ ದೇಶದ ಎಲ್ಲಾ ಕುಟುಂಬ ಸದಸ್ಯರಿಗೆ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಶುಭ ಹಾರೈಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ

ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿ ಶಾಂತಿ,‌ ಸೌಹಾರ್ದತೆ, ಸಮೃದ್ಧಿಯ ಕಡೆಗೆ ನಾಡನ್ನು ಮುನ್ನಡೆಸಲಿ. ನಾಡು ಸಮೃದ್ಧ ಮಳೆ, ಬೆಳೆ ಕಂಡು ಕೃಷಿಕ – ಶ್ರಮಿಕರ ಬದುಕಿನಲ್ಲಿ ಸುಖ-ಶಾಂತಿಯ ಫಸಲು ಹುಲುಸಾಗಿ ಬೆಳೆಯಲಿ, ಅವರ ಬಾಳು ಬಂಗಾರವಾಗಲಿ. ನಾಡ ಬಾಂಧವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ನಾಟಕದ ವಿವಿಧ ದೇಗುಲಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ದೇಶದ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ.