ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಕಲ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.
ಕನ್ನಡ ರಾಜ್ಯೋತ್ಸವದಂದು ಕರ್ನಾಟಕದ ಚೈತನ್ಯ ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕವು ಶ್ರೇಷ್ಠತೆಯ ಕಡೆಗೆ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ ಎಂದು ಆಶಿಸಿರುವ ಪ್ರಧಾನಿ ಮೋದಿ ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಟ್ವಿಟರ್ ಮೂಲಕ ಶುಭಾಶಯ ತಿಳಿಸಿದ್ದಾರೆ.














