ಉದಯಪುರ (Udaipur)-ದೇಶಕ್ಕೆ ಅನಿವಾರ್ಯವಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ತಾಳಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಟೀಕಿಸಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಪ್ರಧಾನಿ ಬೇರೆಲ್ಲಾ ಸಮಯದಲ್ಲಿ ಬಹಳ ನಿರರ್ಗಳವಾಗಿ ಮಾತನಾಡುತ್ತಾರೆ. ಆದರೆ, ದೇಶಕ್ಕೆ ಅವರ ಉಪಶಮನಕಾರಿ ಸ್ಪರ್ಶದ ಅನಿವಾರ್ಯ ಇರುವಾಗ ಮೌನವಾಗಿದ್ದಾರೆ ಎಂದಿದ್ದಾರೆ.
ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಸದಾ, ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ ಎಂದು ಹೇಳುತ್ತಿರುತ್ತಾರೆ. ಅವರ ಪ್ರಕಾರ ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ ಎಂದರೆ ದೇಶವನ್ನು ಶಾಶ್ವತವಾಗಿ ಧ್ರುವೀಕರಣ ಮಾಡುವುದು, ಅಲ್ಪಸಂಖ್ಯಾತರನ್ನು ತುಳಿಯುವುದು ಮತ್ತು ರಾಜಕೀಯ ವಿರೋಧಿಗಳನ್ನು ಬೆದರಿಸುವುದು ಎಂಬುದು ಈಗ ನಿಚ್ಚಳವಾಗಿ ಹೋಗಿದೆ ಎಂದು ಕಿಡಿಕಾರಿದ್ದಾರೆ.