ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಮೂಲಕ ಮತದಾರರನ್ನು ಸೆಳೆಯಲು ಬಿಜೆಪಿ ಮೈಸೂರಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಿದ್ದು, ಏ.೧೪ ರಂದು ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ ಕ್ಷೇತ್ರ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಿದ್ದೇವೆ. ಏ.೧೪ ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಹಣಬಲ, ಹೆಂಡದ ಬಲದ ಮೇಲೆ ಚುನಾವಣೆ ನಡೆಸುತ್ತಿದೆ. ಅಲ್ಲದೇ ಅದು ಅಭಿವೃದ್ಧಿ ಶೂನ್ಯವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯದ ಪಾಲು ಬಂದ್ ಮಾಡಿದ್ದಾರೆ. ಬಡ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ನಿಲ್ಲಿಸಿದೆ. ವಿದ್ಯುತ್ ದರ ಕೂಡ ಏರಿಕೆ ಆಗಿದೆ. ಹಾಲಿನ ದರ ಏರಿಸಿ ರೈತರಿಗೆ ಪ್ರೋತ್ಸಾಹ ಧನ ನೀಡದೆ ಅನ್ಯಾಯ ಮಾಡಿದ್ದಾರೆ. ರೈತರ ಜಮೀನಿಗೆ ಟ್ರಾನ್ಸ್ ಫರ್ಮರ್ ಹಾಕಿಸಿಕೊಳ್ಳಲು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೈನುಗಾರಿಕೆ ಪ್ರೋತ್ಸಾಹ ನೀಡಲು ಯಡಿಯೂರಪ್ಪ ೩ ರೂ. ನೀಡಿದ್ದರು. ಈಗ ರಾಜ್ಯದಲ್ಲಿ ೬೮೦ ಕೋಟಿ ರೂ ಬಾಕಿ ಉಳಿಸಿಕೊಂಡಿದೆ. ೨೪ ಸಾವಿರ ಕೋಟಿ, ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣವನ್ನ ಬೇರೆ ಕಾರ್ಯಕ್ಕೆ ವರ್ಗಾಹಿಸಿಕೊಂಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಒಂದು ಕೈಯ್ಯಲ್ಲಿ ಹಣ ನೀಡಿ, ಮತ್ತೊಂದು ಕೈಯ್ಯಲ್ಲಿ ಕಿತ್ತುಕೊಂಡಿದ್ದಾರೆ ಎಂದರು.