ನವದೆಹಲಿ: ದೇಶದ್ಯಾಂತ ಹೊಸ ವರ್ಷಚಾರಣೆ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ನಡುವಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಎಲ್ಲರಿಗೂ 2024 ರ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಉತ್ತಮ ಆರೋಗ್ಯ ದೊರೆಯಲಿ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್ ಮಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು, 2024 ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. . ಅಂತರ್ಗತ ಮತ್ತು ಸುಸ್ಥಿರ ಅಭಿವೃದ್ಧಿಗೆ ಕೊಡುಗೆ ನೀಡಲು ನವೀಕೃತ ಬದ್ಧತೆಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ತಿಳಿಸಿದ್ದಾರೆ.
ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ವಿಶೇಷವಾಗಿ ಬೆಂಗಳೂರು, ಮುಂಬೈ, ದೆಹಲಿ ಸೇರಿ ಹಲವು ಪ್ರಮುಖ ನಗರಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟುವಂತಿತ್ತು.
ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸುವ ಮೂಲಕ ಯುವ ಜನರು ಸಂಭ್ರಮದಿಂದ ಹೊಸ ವರ್ಷವನ್ನು ಭಾನುವಾರ ಮಧ್ಯರಾತ್ರಿ ಬರಮಾಡಿಕೊಂಡರು.
ರಾಜ್ಯದ ವಿವಿಧೆಡೆಯಿಂದ ಹೊಸ ವರ್ಷದ ಸಂಭ್ರಮಾಚರಣೆಗೆ ಸಾವಿರಾರು ಜನ ಬೆಂಗಳೂರಿಗೆ ಆಗಮಿಸಿದ್ದರು. ಹೀಗಾಗಿ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‌ನ ಪಬ್‌ಗಳು, ಹೋಟೆಲ್‌ಗಳು ತುಂಬಿ ತುಳುಕಿದವು. ಇನ್ನು ರಸ್ತೆಗಳಲ್ಲಿ ಯುವಕ-ಯುವತಿಯರು ರಾತ್ರಿಯಿಡೀ ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು.