ಮನೆ ರಾಷ್ಟ್ರೀಯ ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಪ್ರಧಾನಿ ಮೋದಿ ಆಗಮನ…?

ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಪ್ರಧಾನಿ ಮೋದಿ ಆಗಮನ…?

0

ಮೈಸೂರು(Mysuru): ನಾಡಹಬ್ಬ ವಿಶ್ವವಿಖ್ಯಾತ ದಸರೆಯ ಪ್ರಮುಖ ಆಕರ್ಷಣೆ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು  ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ನಿರೀಕ್ಷೆ ಇದೆ.

ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಅದ್ಧೂರಿಯಾಗಿ ಮಾಡಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳು ನಡೆದಿವೆ.

ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರವರೆಗೆ ನಾಡಹಬ್ಬ ದಸರಾ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಲಿದ್ದಾರೆ. ಈ ಮೂಲಕ ದಸರಾ ಕಂಪು ದೇಶಾದ್ಯಂತ ಹರಡಲಿದೆ. ಅಲ್ಲದೇ ರಾಷ್ಟ್ರಪತಿಯೊಬ್ಬರು ದಸರಾ ಉದ್ಘಾಟಿಸುತ್ತಿರುವುದು ದಸರಾ ಇತಿಹಾಸದಲ್ಲೇ ಮೊದಲು.

ಇದೇ ಸಂದರ್ಭದಲ್ಲಿ ಅಕ್ಟೋಬರ್ 5 ರಂದು ನಡೆಯುವ ಜಂಬೂ ಸವಾರಿಗೆ ಪುಷ್ಪಾರ್ಷನೆ ಮಾಡಲು ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂಬ ಮಾಹಿತಿ ದೊರೆತಿದ್ದು, ದಸರಾ ಇನ್ನಷ್ಟು ಕಳೆಗಟ್ಟಲಿದೆ.

ಲಭ್ಯವಾಗದ ಅಧಿಕೃತ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರು ದಸರಾಗೆ ಆಹ್ವಾನಿಸಲಾಗಿದೆ. ಆದರೆ, ರಾಷ್ಟ್ರಪತಿ ಕಾರ್ಯಕ್ರಮ ನಿಗದಿಯಾಗಿರುವುದರಿಂದ ಭದ್ರತೆಗೆ ತೊಂದರೆಯಾಗಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ  ಮೋದಿ ಮೈಸೂರಿಗೆ ಬರುವ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆ ಹೆಚ್ಚಿದೆ.  ಅಕ್ಟೋಬರ್ 4ರ ಬದಲು 5ರಂದು ಬರುವ ಸಾಧ್ಯತೆ ಇದೆ ಇದೆ ಎನ್ನಲಾಗಿದೆ. ಆದರೆ ಪ್ರಧಾನಿ ಕಚೇರಿಯಿಂದ ಯಾವ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.   ಇನ್ನಷ್ಟೇ ಪ್ರಧಾನಿ ಕಚೇರಿಯಿಂದ  ಅಧಿಕೃತ ಮಾಹಿತಿ ಹೊರಬೀಳಬೇಕಿದೆ.