Saval TV on YouTube
ಬೆಂಗಳೂರು(Bengaluru): ನ. 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಐಎಬಿಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿದ್ದು, ಸದರಿ ಕಾರ್ಯಕ್ರಮದಲ್ಲಿ 4 ರಿಂದ 5ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದರು.
ನ.11 ರಂದು ಕಾರ್ಯಕ್ರಮ ನಡೆಯುವ ಸ್ಥಳವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಡಿಸಿಪಿ ಅನೂಪ್ ಶೆಟ್ಟಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರೊಂದಿಗೆ ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ನ.11ರಂದು ಮೋದಿ ಪ್ರವಾಸ ಹಿನ್ನೆಲೆ ಎಲ್ಲಾ ವ್ಯವಸ್ಥೆ ಪರಿಶೀಲನೆ ನಡೆಸಿದ್ದೇನೆ. ಪ್ರಧಾನಿ ಮೋದಿ ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಕಾರ್ಯಕ್ರಮಕ್ಕೆ 4ರಿಂದ 5 ಲಕ್ಷ ಜನ ಸೇರುವ ನಿರೀಕ್ಷೆ. ಇದೆ. ಟ್ರಾಫಿಕ್ ಸೇರಿ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ. ಭದ್ರತೆಗೆ 4 ಸಾವಿರಕ್ಕೂ ಹೆಚ್ಚು ಪೊಲೀಸರು ನಿಯೋಜನೆ ಮಾಡುತ್ತೇವೆ ಎಂದು ತಿಳಿಸಿದರು.