ಮಂಗಳೂರು(Mangalore): ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಆಯೋಜನೆಗೊಂಡಿರುವ ನಗರದ ಗೋಲ್ಡ್ ಫಿಂಚ್ ಮೈದಾನಕ್ಕೆ ಆಗಮಿಸಿದ್ದಾರೆ.
ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮೋದಿ ಅವರಿಗೆ ಹಾರ, ಪೇಟ ತೊಡಿಸಿ, ಉಡುಪಿ ಶ್ರೀಕೃಷ್ಣ ನ ಮೂರ್ತಿಯನ್ನು ನೀಡಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಪರಶುರಾಮನ ಮೂರ್ತಿ ನೀಡಿದರು.
ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ ಇದ್ದರು.
ಮುಖ್ಯ ವೇದಿಕೆಗೆ ಪ್ರವೇಶ ಸಿಗದ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಬ್ಯಾರಿಕೇಡ್ ತಳ್ಳಿ ಮುನ್ಬುಗ್ಗಲು ಯತ್ನಿಸಿದ ಅಭಿಮಾನಿಗಳನ್ನು ಭದ್ರತಾ ಸಿಬ್ಬಂದಿ ತಡೆದರು.
ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಮತ್ತು ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊಕೆಮಿಕಲ್ಸ್ ಲಿಮಿಟೆಡ್‌ನ (ಎಂಆರ್‌ಪಿಎಲ್) ಒಟ್ಟು 3,783 ಕೋಟಿ ಮೊತ್ತದ ಎಂಟು ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವನ್ನು ಪ್ರಧಾನಿ ನೆರವೇರಿಸುವರು.