ಮನೆ ರಾಷ್ಟ್ರೀಯ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

0

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಮಂಗಳವಾರ) ಕೇರಳದಲ್ಲಿ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.

ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ PSLV ಇಂಟಿಗ್ರೇಷನ್ ಫೆಸಿಲಿಟಿ (PIF), ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಹೊಸ ‘ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಇಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ’, ತಿರುವನಂತಪುರದ VSSC ನಲ್ಲಿ ‘ಟ್ರೈಸಾನಿಕ್ ವಿಂಡ್ ಟನಲ್’ ಈ ಮೂರು ಯೋಜನೆಗಳಿಗೆ ಮೋದಿ ಚಾಲನೆ ನೀಡಿದ್ದಾರೆ. ಪ್ರಸ್ತುತ ಯೋಜನೆಗಳನ್ನ ಸುಮಾರು ₹1,800 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಗಗನ್‌ ಯಾನ್ ಮಿಷನ್‌ ನ ಪ್ರಗತಿಯನ್ನು ಪರಿಶೀಲಿಸಿದ ಪ್ರಧಾನಿ ದೇಶದ ಮೊದಲ ಮಾನವ ಬಾಹ್ಯಾಕಾಶ ಯಾನಕ್ಕಾಗಿ ತರಬೇತಿ ಪಡೆಯುತ್ತಿರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಘೋಷಿಸಿದರು.

ನಾಲ್ವರು ಗಗನಯಾತ್ರಿಗಳು: ಪ್ರಶಾಂತ್ ಬಾಲಕೃಷ್ಣನ್ ನಾಯರ್, ಅಂಗದ್ ಪ್ರತಾಪ್, ಅಜಿತ್ ಕೃಷ್ಣನ್ ಮತ್ತು ಶುಭಾಂಶು ಶುಕ್ಲಾ.

ಕೇರಳ ರಾಜ್ಯದ ರಾಜಧಾನಿ ಬಳಿಯ ತುಂಬಾದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (VSSC) ಮೋದಿ ಈ ಹೆಸರು ಘೋಷಿಸಿದ್ದಾರೆ. ಈ ಅವರು ನಾಲ್ವರಿಗೆ ಮೋದಿ astronaut wings ನೀಡಿದ್ದಾರೆ.

ಅವರು ಕೇವಲ 4 ಹೆಸರುಗಳು ಅಥವಾ 4 ಮನುಷ್ಯರಲ್ಲ, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯಲು ಹೊರಟಿರುವ ನಾಲ್ಕು ಶಕ್ತಿಗಳು. 40 ವರ್ಷಗಳ ನಂತರ ಭಾರತೀಯನೊಬ್ಬ ಬಾಹ್ಯಾಕಾಶಕ್ಕೆ ಹೋಗುತ್ತಿದ್ದಾನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ (ವಿಎಸ್‌ಎಸ್‌ಸಿ) ಭೇಟಿ ನೀಡಿದ ಪ್ರಧಾನಿ ಮೋದಿ ಜತೆ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇರಳ ಸಿಎಂ ಪಿಣರಾಯಿ ವಿಜಯನ್, ಎಂಒಎಸ್ ಮುರಳೀಧರನ್ ಕೂಡಾ ಇದ್ದರು. ಈ ಸಂದರ್ಭದಲ್ಲಿ ಇಸ್ರೋ ಅಧ್ಯಕ್ಷ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದ್ದಾರೆ.

ಹಿಂದಿನ ಲೇಖನನಿವೃತ್ತ ಜಿಲ್ಲಾ ನ್ಯಾಯಾಧೀಶರಿಗೆ ₹19ರಿಂದ 20 ಸಾವಿರ ಅಲ್ಪ ಪಿಂಚಣಿ ನೀಡುವುದು ಸರಿಯಲ್ಲ: ಸುಪ್ರೀಂ ಕೋರ್ಟ್
ಮುಂದಿನ ಲೇಖನಗೆಲ್ಲುವುದಕ್ಕಿಂತಲೂ ಮುಖ್ಯವಾಗಿ ಒಗ್ಗಟ್ಟು ಪ್ರದರ್ಶನಕ್ಕಾಗಿ ಅಭ್ಯರ್ಥಿ ಕಣಕ್ಕೆ: ಎಚ್.ಡಿ.‌ ಕುಮಾರಸ್ವಾಮಿ