ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು ಈ ಮಧ್ಯೆ ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಇಂದು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸ್ವಾಗತ ಕೋರಿದರು. ನಂತರ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ಧಾಮ್ ರೈಲು ನಿಲ್ದಾಣದವರೆಗೆ 15 ಕಿ.ಮೀ ರೋಡ್ ಶೋ ನಡೆಸುತ್ತಿದ್ದಾರೆ. ಮೋದಿ ಸಾಗುವ ರೋಡ್ ನಲ್ಲಿ ಜನಸಾಗರವೇ ನಿಂತಿದ್ದು ಕಲಾತಂಡಗಳು ಮೋದಿಗೆ ಸ್ವಾಗತ ಕೋರಿದ್ದಾರೆ. ಅಭಿಮಾನಿಗಳಿಂದ ಮೋದಿ ಅವರಿಗೆ ಹೂ ಮಳೆ ಸುರಿಸಿ ಸ್ವಾಗತ ಕೋರಿದ್ದಾರೆ.
ಅಯೋಧ್ಯೆಯಲ್ಲಿ 15,700 ಕೋಟಿ ರೂ. ಯೋಜನೆಗಳಿಗೆ ಮೋದಿ ಅವರು ಚಾಲನೆ ನೀಡಲಿದ್ದಾರೆ. 240 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಅಯೊಧ್ಯೆ ಧಾಮ್ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ.