Saval TV on YouTube
ಅಹಮದಾಬಾದ್(Ahmadabad): ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಶತಾಯುಷಿ ಹೀರಾಬೆನ್ ಮೋದಿ ಅಸ್ವಸ್ಥರಾಗಿದ್ದು ಅವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಬೆಳಗ್ಗೆ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಅಹಮದಾಬಾದ್’ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಗುಜರಾತ್ನ ಅನೇಕ ಶಾಸಕರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ.
2016ರಲ್ಲೂ ಹೀರಾಬೆನ್ ಅವರ ಆರೋಗ್ಯ ಹದಗೆಟ್ಟಿತ್ತು. ಅವರು ಅಹಮದಾಬಾದ್’ನ ಸಿವಿಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಸದ್ಯ ಹೀರಾಬೆನ್ ಅವರು ಮತ್ತೊಬ್ಬ ಪುತ್ರ ಪಂಕಜ್ ಭಾಯ್ ನಿವಾಸದಲ್ಲಿ ವಾಸಿಸುತ್ತಿದ್ದಾರೆ.
ಪ್ರಧಾನಿ ಮೋದಿ ಅಹಮದಾಬಾದ್’ಗೆ ನೀಡಿ ತಾಯಿಯ ಆರೋಗ್ಯ ವಿಚಾರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.