Saval TV on YouTube
ನವದೆಹಲಿ(Newdelhi): ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ, ಶತಾಯುಷಿ ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
`ತಾಯಿ ಮತ್ತು ಮಗನ ನಡುವಿನ ಪ್ರೀತಿ ಶಾಶ್ವತ ಮತ್ತು ಅಮೂಲ್ಯವಾದುದು. ಮೋದಿ ಜೀ, ಈ ಕಷ್ಟದ ಸಮಯದಲ್ಲಿ ನನ್ನ ಪ್ರೀತಿ ಮತ್ತು ಬೆಂಬಲ ನಿಮ್ಮೊಂದಿಗಿದೆ. ನಿಮ್ಮ ತಾಯಿ ಹೀರಾಬೆನ್ ಮೋದಿ ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಬುಧವಾರ ಬೆಳಗ್ಗೆ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಅಹಮದಾಬಾದ್’ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.