ಮನೆ ದೇಶ ನಗರಕ್ಕೆ ಪ್ರಧಾನಿ ಆಗಮನ: ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಸ್ಥಳ ಪರಿಶೀಲನೆ

ನಗರಕ್ಕೆ ಪ್ರಧಾನಿ ಆಗಮನ: ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಸ್ಥಳ ಪರಿಶೀಲನೆ

0

ಮೈಸೂರು(Mysuru): ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದು, ಸದರಿ ಕಾರ್ಯಕ್ರಮವನ್ನು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವಸಿದ್ದತೆಗಳ ಕುರಿತು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಪರಿಶೀಲಿಸಿದರು.

ವೇದಿಕೆ ನಿರ್ಮಾಣ, ಗಣ್ಯರು, ಫಲಾನುಭವಿಗಳಿಗೆ ಆಸನದ ವ್ಯವಸ್ಥೆ, ಭದ್ರತೆ ಸೇರಿದಂತೆ ಹಲವು ವಿಚಾರಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ನಾಲ್ಕು ಜಿಲ್ಲೆಗಳ‌ ಫಲಾನುಭವಿಗಳನ್ನು ಒಂದೆಡೆ ಸೇರಿಸುವ ಕಾರ್ಯಕ್ರಮ ಇದಾಗಿದ್ದು ಎಲ್ಲೂ ಲೋಪವಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರಿನ ಜನತೆ ಪರವಾಗಿ ಸ್ವಾಗತ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ. ಇದು ಸರ್ಕಾರಿ ಕಾರ್ಯಕ್ರಮ ಆಗಿದ್ದು ಯಾವುದೇ ಲೋಪ, ಕೊರತೆ ಆಗದಂತೆ ಕಾರ್ಯಕ್ರಮ ಯಶಸ್ವಿಗೊಳಿಸಲಾಗುವುದು ಎಂದರು.

ಯೋಗ ಕಾರ್ಯಕ್ರಮದಲ್ಲಿ 15 ಸಾವಿರ ಮಂದಿ ಭಾಗಿ:

ಅರಮನೆ ಆವರಣದಲ್ಲಿ ಯೋಗ ಕಾರ್ಯಕ್ರಮಕ್ಕೆ 15 ಸಾವಿರ ಜನ ಭಾಗಿ ಆಗುವ ಬಗ್ಗೆ ಕೇಂದ್ರ ಸರ್ಕಾರವೇ ತೀರ್ಮಾನ ಕೈಗೊಂಡಿದೆ. ಆನ್ ಲೈನ್ ನಲ್ಲಿ ನೋಂದಣಿ ಮಾಡಬಹುದು. ಕೇಂದ್ರದ ನಿರ್ದೇಶನದ ಅನುಸಾರ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಯಾರು ಬೇಕಾದರೂ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಆದವರಿಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು.

ಹಿಂದಿನ ಲೇಖನಅತ್ಯಾಚಾರಿಯ ಸಂತ್ರಸ್ತೆ ಹಾಗೂ ಮಕ್ಕಳ ಸುಖ ಜೀವನ: ಶಿಕ್ಷೆ ರದ್ದು ಪಡಿಸಿದ ಸುಪ್ರೀಂಕೋರ್ಟ್
ಮುಂದಿನ ಲೇಖನಲಘು ಮೋಟಾರು ವಾಹನ ಚಾಲನೆ ಪರವಾನಗಿವುಳ್ಳವರು ಸಾರಿಗೆ ವಾಹನ ಚಾಲನೆ ಮಾಡಬಹುದು: ಹೈಕೋರ್ಟ್