ಕಾಪು: ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಗಾಯಾಳು ವಿದ್ಯಾರ್ಥಿನಿ.
ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಖಾಸಗಿ ಬಸ್ ನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.