ಕೋಲಾರ : ಡಿವೈಡರ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೋಲಾರ ಕೋಲಾರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಪವನ್ ಕಾಲೇಜು ಬಳಿ ಘಟನೆ ನಡೆದಿದೆ.
ಖಾಸಗಿ ಬಸ್ ಆಂದ್ರದ ನಲ್ಲೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಸುಮಾರು 40 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ.
ಅಗ್ನಿಶಾಮಕ ದಳ ಸಿಬ್ಬಂದಿ ಬಸ್‌ನ ಗಾಜುಗಳನ್ನು ಒಡೆದು ಪ್ರಯಾಣಿಕರನ್ನು ಹೊರತಂದಿದ್ದಾರೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.















