ಯಲ್ಲಾಪುರ: ಖಾಸಗಿ ಸಂಸ್ಥೆಯ ಬಸ್ಸೊಂದು ಉರುಳಿ ಬಿದ್ದು ಚಾಲಕ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ಯಲ್ಲಾಪುರ ತಾಲೂಕಿನ ರಾ.ಹೆದ್ದಾರಿ 63 ಅಪಾಯಕಾರಿ ಸ್ಥಳ ಕೆ.ಮಿಲನ್ ಹೋಟೆಲ್ ಬಳಿ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು, ತುರ್ತು ಚಿಕಿತ್ಸೆಗೆ ಹುಬ್ಬಳ್ಳಿಗೆ ಕಳಿಸಲಾಗಿದೆ. ಒಟ್ಟು 25 ಜನ ಪ್ರಯಾಣಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ತಾಲೂಕು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಪಿಐ ರಂಗನಾಥ ನೀಲಮ್ಮನವರ್ ಮತ್ತು ಪಿಎಸ್ ಐ ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ಚಾಲಕನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.