ಚಿತ್ರದುರ್ಗ: ಮದುವೆ ಕಾರ್ಯಕ್ರಮಕ್ಕಾಗಿ ಹೊಸದುರ್ಗದಿಂದ ದಾವಣಗೆರೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ, ಸ್ಥಳದಲ್ಲೇ ಒಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಆವಿನಹಟ್ಟಿ ಸಮೀಪ ಶನಿವಾರ ಸಂಜೆ ನಡೆದಿದೆ.
ಹೊಸದುರ್ಗ ತಾಲೂಕಿನ ಸಿಗೇಹಟ್ಟಿ ಗ್ರಾಮದಿಂದ ದಾವಣಗೆರೆಗೆ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತ ವ್ಯಕ್ತಿ ಮಂಜುನಾಥ್(40) ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡವರನ್ನು ಹೊಳಲ್ಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸರ್ಗದಿಂದ ಹೊಳಲ್ಕೆರೆ ಕಡೆಗೆ ಸಾಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ ಅಡಿಯಲ್ಲಿ ಸಿಲುಕಿದ ಪ್ರಯಾಣಿಕರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ.
ಢಿಕ್ಕಿಯ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.